Friday, March 6, 2026

spot_img

ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ !

ಹೆಬ್ರಿ : ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಅವರು ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಯ ನಿಖರ ಕಾರಣ ಇನ್ನಷ್ಟೇ ಬಹಿರಂಗವಾಗಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 ಹೆಬ್ರಿಯಲ್ಲಿ ವೈನ್ಸ್‌ ಶಾಪ್‌ ನಡೆಸಿಕೊಂಡು ಜೀವನ ನಿರ್ವಹಿಸುತ್ತಿದ್ದ ಸುದೀಪ್ ಭಂಡಾರಿಯವರು ಅತ್ಯಂತ ಸರಳ ಹಾಗೂ ಸ್ನೇಹಪರ ವ್ಯಕ್ತಿಯಾಗಿ ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು.

ಅವರ ಆತ್ಮಹತ್ಯೆ ಸುದ್ದಿ ತಿಳಿದು ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಆಘಾತ ವ್ಯಕ್ತವಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles