Thursday, August 6, 2026

spot_img

ಮಾಡೆಲಿಂಗ್ ಕ್ಷೇತ್ರದ ಯುವತಿ ಆತ್ಮಹತ್ಯೆ: ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

ಉಡುಪಿ : ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಮಾಡಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿ ಕೃತಿ ಬಂಗೇರ (27) ಎಂದು ಗುರುತಿಸಲಾಗಿದೆ. ಕೃತಿ ಅವರು ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಲ್ಲದೆ, ಉಡುಪಿಯ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಸುಮಾರು ಐದು ತಿಂಗಳಿಂದ ಅವರು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ.

ಗುರುವಾರ ಬೆಳಗ್ಗೆ ತಾಯಿ ರತ್ನ ಅವರು ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದರೆ, ಸಹೋದರಿಯೂ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಗೆ ಮನೆಗೆ ಹಿಂದಿರುಗಿದ ವೇಳೆ ಕೃತಿ ಅವರು ತಾಯಿಯನ್ನು ಮನೆಯ ಹೊರಗೆ ಕಳುಹಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಬಹಳ ಹೊತ್ತಾದರೂ ಬಾಗಿಲು ತೆರೆಯದ ಕಾರಣ ರತ್ನ ಅವರು ತಮ್ಮ ಸಹೋದರ ಚಂದ್ರ ಅವರಿಗೆ ಕರೆ ಮಾಡಿದ್ದಾರೆ. ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಮಲಗುವ ಕೋಣೆಯಲ್ಲಿ ಕೃತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೃತಿ ಅವರು ಕಳೆದ ಕೆಲವು ದಿನಗಳಿಂದ ಮಾನಸಿಕ ಒತ್ತಡದಲ್ಲಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles