ಉಡುಪಿ: ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿ ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.

ಮೃತರನ್ನು ಅಲೆವೂರು ನಿವಾಸಿ ಸದಾನಂದ ದೇವಾಡಿಗ (55) ಎಂದು ಗುರುತಿಸಲಾಗಿದ್ದು, ಅವರು ಗ್ರಾಮ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು.

ಬೆಳಿಗ್ಗೆ ಮಾವಿನಕಾಯಿ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ತೆರವುಗೊಳಿಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕಾರ ನೀಡಿದರು.



