ಉಡುಪಿ : ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಎನ್.ಸಿ.ಡಿ. ವಿಭಾಗ, ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಮ್.ಸಿ. ದಂತ ವೈದ್ಯಕೀಯ ವಿಭಾಗ ಮಣಿಪಾಲ ಹಾಗೂ ಅಪ್ಪು ಅಭಿಮಾನಿಗಳ ಬಳಗ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಹಿಳೆಯರಿಗಾಗಿ ‘ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ’ವು ಮಾ.8 ಶನಿವಾರ ಬೆಳಿಗ್ಗೆ ಗಂಟೆ 9.00ರಿಂದ ಮಧ್ಯಾಹ್ನ ಗಂಟೆ 12.30ರ ವರೆಗೆ ಉಡುಪಿ ಕುಂಜಿಬೆಟ್ಟುವಿನಲ್ಲಿರುವ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ತಿಳಿಸಿದ್ದಾರೆ.
ಈ ಉಚಿತ ‘ಆರೋಗ್ಯ ತಪಾಸಣಾ ಶಿಬಿರ’ದಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ತಪಾಸಣೆಯ ಸಹಿತ ಗರ್ಭಕೋಶದ ಕ್ಯಾನ್ಸರ್, ಬ್ರೆಸ್ಟ್ ಕ್ಯಾನ್ಸರ್, ಮೂಳೆ ಸಾಂದ್ರತೆ, ಜನರಲ್ ಮೆಡಿಸಿನ್, ಸ್ಕಿನ್, ಇ.ಎನ್.ಟಿ, ಕಣ್ಣು ಹಾಗೂ ಹಲ್ಲಿನ ತಪಾಸಣೆಯ ಸೇವೆ ಲಭ್ಯವಿದೆ. ವಿಶೇಷವಾಗಿ ಅಂಗಾಗ ದಾನದ ಕುರಿತು ಮಾಹಿತಿ ಹಾಗೂ ನೊಂದಾವಣೆ ನಡೆಯಲಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಧ್ಯಾ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.