Wednesday, March 4, 2026

spot_img

ಮೋದ್ ಮಧ್ವರಾಜ್ ಕಡೆಗಣನೆ ವಿವಾದಕ್ಕೆ ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಸುದ್ದಿಗೋಷ್ಟಿ..

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಕನಕನ ಕಿಂಡಿಗೆ ಸ್ವರ್ಣ ಕವಚ ದಾನ ಮಾಡಿದ ಪ್ರಮೋದ್ ಮಧ್ವರಾಜ್ ಅವರನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ, ಬಿಜೆಪಿ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಪ್ರಮೋದ್ ಮಧ್ವರಾಜ್ ಅವರೊಡನೆ ಜಂಟಿ ಸುದ್ದಿಗೋಷ್ಠಿ ನಡೆಸಿ ತನ್ನ ನಿಲುವನ್ನು ಸ್ಪಷ್ಟಪಡಿಸಿದರು.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮಧ್ವರಾಜ್ ಅವರು, ತಮ್ಮ ಯಾವುದೇ ಹಿಂದಿನ ಹೇಳಿಕೆಗಳಲ್ಲಿ ಅಸಮಾಧಾನದ ಭಾವನೆ ಇರಲಿಲ್ಲ. ಮಠವಾಗಲಿ, ಜಿಲ್ಲಾ ಬಿಜೆಪಿಯಾಗಲಿ ನನ್ನ ಪ್ರವೇಶಕ್ಕೆ ತೊಂದರೆ ನೀಡಿಲ್ಲ. ಯಾರನ್ನೂ ನಾನು ದೂರವುದಿಲ್ಲ. ನನ್ನ ಸೇವೆಯನ್ನು ಪ್ರಧಾನಿ ಉದ್ಘಾಟಿಸಿರುವುದು ನನಗೆ ಅಪಾರ ಸಂತೋಷ ಎಂದು ಅವರು ಪುನಃ ಹೇಳಿದರು.

ಮಠದವರೂ ಅಲ್ಲ, ಜಿಲ್ಲಾ ಬಿಜೆಪಿ ನಾಯಕರಾಗಲಿ ಯಾರು ಕೂಡ ನನ್ನ ಕಡೆಗಣಿಸಿದ್ದಾರೆ ಎನಿಸುತ್ತಿಲ್ಲ. ನನ್ನನ್ನು ಕಡೆಗಣಿಸಿದವರಾರು ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ, ಅದನ್ನು ಹುಡುಕುವ ಪ್ರಯತ್ನ ನಾನು ಮಾಡಿಲ್ಲ. ಎಂಬುದು ಸ್ಪಷ್ಟಎಂದು ಮಧ್ವರಾಜ್ ತಿಳಿಸಿದರು. ಕನಕನ ಕಿಂಡಿಗೆ ಸ್ವರ್ಣ ಕವಚ ದಾನ ಮಾಡಿದ ವ್ಯಕ್ತಿಯಾಗಿ ಪ್ರಧಾನಿಯ ಉದ್ಘಾಟನಾ ಕ್ಷಣವನ್ನು ಸ್ಥಳದಲ್ಲೇ ನಿಂತು ವೀಕ್ಷಿಸುವ ಆಸೆ ಇದ್ದರೂ ಅದು ಸಾಧ್ಯವಾಗಿಲ್ಲವೆಂದ ತನ್ನ ಪರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪರವಾಗಿ ಅಭಿಪ್ರಾಯ ಹಂಚಿದವರಿಗೆ ಪತ್ರಿಕಾಗೋಷ್ಟಿಯಲ್ಲಿ ಧನ್ಯವಾದ ತಿಳಿಸಿದರು.

ಇನ್ನು ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷರಿಂದ ಸ್ಪಷ್ಟನೆ ಮುಂದಾಗಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಠ ಮತ್ತು ನಮ್ಮಿಂದ ಕಳುಹಿಸಿದ ಅತಿಥಿಗಳ ಪಟ್ಟಿಯಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರು ಸ್ಪಷ್ಟವಾಗಿ ಸೇರಿಸಲಾಗಿತ್ತು. ಆದರೆ ಪ್ರಧಾನಿಯ ಕಚೇರಿಯಿಂದ ಪರಿಷ್ಕೃತ ಪಟ್ಟಿಯನ್ನು ಹಿಂತಿರುಗಿಸಿದಾಗ ಅವರು ಸೇರಿದಂತೆ ಹಲವು ಹೆಸರುಗಳು ಇರಲಿಲ್ಲ. ಇದರಲ್ಲಿ ಜಿಲ್ಲಾ ಬಿಜೆಪಿ ಯಾವುದೇ ರೀತಿಯಲ್ಲೂ ಪಾತ್ರವಹಿಸಿಲ್ಲ. ಪ್ರಮೋಧ್ ಮಧ್ವರಾಜ್ ಅವರೇ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹಾಲು–ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್ ಮಧ್ವರಾಜ್ ಒಟ್ಟಿದ್ದೇವೆ ಎಂದ ಅವರು, ರೋಡ್‌ಶೋ ಮತ್ತು ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುವುದನ್ನು ಉಲ್ಲೇಖಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles