ಕೋಟ : ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ರಕ್ಷಕ –ಶಿಕ್ಷಕ ಸಂಘದ ಸಭೆಯನ್ನು ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಜೇಂದ್ರ ಎಸ್ ನಾಯಕ ಇವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ಕುರಿತು ಪೋಷಕರ ಜೊತೆಯಲ್ಲಿ ಸಂವಾದ ನಡೆಸಲಾಯಿತು.
ರಕ್ಷಕ-ಶಿಕ್ಷಕ ಸಂಘದ ಸಂಚಾಲಕರಾದ ಡಾ.ಶಂಕರ ನಾಯ್ಕ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ರಮೇಶ್ ಆಚಾರ್, ಐ.ಕ್ಯೂ.ಎ.ಸಿ ಸಂಚಾಲಕ ಡಾ.ಸುಬ್ರಹ್ಮಣ್ಯ ಎ. ಹಾಗೂ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸುರೇಶ್ ಪೂಜಾರಿ ಹಾಗೂ ಬೋಧಕ/ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಗಳಾದ ತ್ರಿಶಾ ಕಾರ್ಯಕ್ರಮ ನಿರೂಪಿಸಿ, ಸಹನಾ ವಂದಿಸಿದರು.