ಉಡುಪಿ : ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿ, ಸಾರ್ವಜನಿಕರ ಪ್ರೀತಿ, ವಿಶ್ವಾಸ ಹಾಗೂ ಮೆಚ್ಚುಗೆಗೆ ಪಾತ್ರರಾಗಿದ್ದ ರಶ್ಮಿ ಎಸ್.ಆರ್. ಅವರು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ (ಟಿಎಪಿಸಿಎಂಎಸ್) ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಕುಂದಾಪುರ ಉಪವಿಭಾಗದಲ್ಲಿ ಎರಡು ಅವಧಿಗಳಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ರಶ್ಮಿ ಅವರು ತಮ್ಮ ದಕ್ಷ ಆಡಳಿತ, ಜನಪರ ಕಾಳಜಿ ಹಾಗೂ ಸರಳ ನಡೆನುಡಿಯ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರ ಮುಂದಿನ ವೃತ್ತಿಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ನಿರ್ದೇಶಕರಾದ ಎಂ. ಮೋಹನದಾಸ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಆನಂದ ಬಿಲ್ಲವ, ಎಸ್. ಜಯರಾಮ ಶೆಟ್ಟಿ, ಪ್ರಭಾಕರ ಶೆಟ್ಟಿ ಜಡ್ಕಲ್, ಉಮೇಶ್ ಶೆಟ್ಟಿ ಕಲ್ಗದ್ದೆ, ಸದಾನಂದ ಬಳ್ಕೂರು, ಎ. ಕಿರಣ್ ಹೆಗ್ಡೆ ಅಂಪಾರು, ಪ್ರಭಾಕರ ಶೆಟ್ಟಿ ಕೆರಾಡಿ, ಸತೀಶ್ ಶೆಟ್ಟಿ ಕುಂದಾಪುರ, ರಕ್ಷಿತ್ ಶೆಟ್ಟಿ ಕಾಳಾವರ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.


