Wednesday, April 9, 2025

spot_img

ರಾಜ್ಯದ ಎಲ್ಲ ವರ್ಗದ ಸನ್ನದುದಾರರ ಬೇಡಿಕೆ ಮತ್ತು ಸಮಸ್ಯೆ: ಸಾಂಕೇತಿಕ ಪ್ರತಿಭಟನೆ

ಉಡುಪಿ: ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ.20 ಲಾಭಾಂಶ ನೀಡುವುದು, ಹೆಚ್ಚುವರಿ ಅಬಕಾರಿ ಶುಲ್ಕವನ್ನು ಕಡಿಮೆ ಮಾಡುವುದು, 2005ರಲ್ಲಿ ತಿದ್ದುಪಡಿಯಾಗಿರುವ ಅಬಕಾರಿ ಕಾಯ್ದೆಯನ್ನು ಪುನರ್ ವಿಮರ್ಶಿಸಿ ತಿದ್ದುಪಡಿ ಮಾಡುವುದು, ಮಿಲಿಟರಿ ಕ್ಯಾಂಟೀನ್ ಸ್ಟೋರ್‌ಗಳ, ಡ್ಯೂಟಿ ಫ್ರೀ ಹೆಸರಿನಲ್ಲಿ ಬರುವ ನಕಲಿ ಮದ್ಯ, ಗೋವಾದಿಂದ ಬರುವ ಮದ್ಯ ಮತ್ತು ನಕಲಿ ಮದ್ಯ ತಯಾರಕರ ಕಳ್ಳಭಟ್ಟಿ ಕೇಂದ್ರಗಳ ಬಗ್ಗೆ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವೈನ್ ಮರ್ಚೆಂಟ್ಸ್‌ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಬಿ.ಗೋವಿಂದರಾಜ್ ಹೆಗ್ಡೆ ಹೇಳಿದರು.

ಅವರು ಶುಕ್ರವಾರದಂದು ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ರಾಜ್ಯದ ಎಲ್ಲ ವರ್ಗದ ಸನ್ನದುದಾರರ ಬೇಡಿಕೆ ಮತ್ತು ಸಮಸ್ಯೆಗಳಿಗೆ ಸಂಬಂಧಿಸಿ ರಾಜ್ಯ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್‌ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದರು. ಅಸೋಸಿಯೇಷನ್‌ನ ಈ ಎಲ್ಲಾ ಬೇಡಿಕೆಗಳನ್ನು 2024ರ ನವೆಂಬರ್ ತಿಂಗಳಿನಲ್ಲಿ ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ 5 ತಿಂಗಳು ಕಳೆದರೂ ಇನ್ನು ಕೂಡ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬಜೆಟ್‌ನಲ್ಲಿಯೂ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬೇಡಿಕೆಗಳು ಈಡೇರದಿದ್ದರೆ ಮುಂದೆ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಅವರಿಗೆ ಸಲ್ಲಿಸಲಾಯಿತು. ಪ್ರಧಾನ ಕಾರ್ಯದರ್ಶಿ ಜನಾರ್ದನ್ ಎಂ.ಪೂಜಾರಿ, ಉಡುಪಿ ತಾಲೂಕು ಗೌರವಾಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಕಾರ್ಕಳ ತಾಲೂಕು ಕೋಶಾಧಿಕಾರಿ ನವೀನ್‌ಚಂದ್ರ ಶೆಟ್ಟಿ, ಉಡುಪಿ ತಾಲೂಕು ಸಂಘಟನ ಕಾರ್ಯದರ್ಶಿ ಮಹೇಶ್ ಅಂಚನ್ ಕಟಪಾಡಿ, ಕುಂದಾಪುರ ತಾಲೂಕು ಖಜಾಂಚಿ ವಾದಿರಾಜ ಶೆಟ್ಟಿ, ಉಡುಪಿ ತಾಲೂಕು ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಕಾರ್ಕಳ ತಾಲೂಕು ಅಧ್ಯಕ್ಷ ಶೋಧನ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಅಧ್ಯಕ್ಷ ರೋಹಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles