Thursday, October 23, 2025

spot_img

ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್: ಸಿ.ಎಂ ಸಿದ್ದರಾಮಯ್ಯ

ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ, ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ. ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ, ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ. ಆಂದ್ರ-ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಅನ್ಯಾಯ: ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ. ಮನುಸ್ಮೃತಿ ವಿರೋಧಿಸಿ-ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ. ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿ ದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನ: ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಸಿ.ಎಂ ಸಿದ್ದರಾಮಯ್ಯ ವಿಶ್ಲೇಷಣೆ

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles