Saturday, November 7, 2026

spot_img

ರಾಜ್ಯಪಾಲೆ ಡಾ. ಸುಧಾ ಯಾದವ್ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಅಧಿಕಾರ ವಹಿಸಿಕೊಂಡಿರುವ ಹರಿಯಾಣ ಮೂಲದ ಡಾ. ಸುಧಾ ಯಾದವ್ ಅವರನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ಮಾಡಿ, ಶಾಲು ಹೊದಿಸಿ ಅಭಿನಂದಿಸಿ ಶುಭ ಹಾರೈಸಿದರು.

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಬಿಎಸ್‌ಎಫ್‌ನ ಡೆಪ್ಯೂಟಿ ಕಮಾಂಡಂಟ್ ಸುಖ್‌ಬೀರ್ ಸಿಂಗ್ ಯಾದವ್ ಅವರ ಪತ್ನಿಯಾಗಿರುವ ಡಾ. ಸುಧಾ ಯಾದವ್ ಅವರು ಪತಿಯ ವೀರಮರಣದ ಬಳಿಕ ಸಾರ್ವಜನಿಕ ಜೀವನ ಪ್ರವೇಶಿಸಿದ್ದರು. ಮಹೇಂದ್ರಗಢ ಕ್ಷೇತ್ರದಿಂದ ಲೋಕಸಭಾ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದ ಅವರು, ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆಯಾಗಿ ಹಾಗೂ ಬಿಜೆಪಿಯ ಅತ್ಯುನ್ನತ ಸಂಸದೀಯ ನಿರ್ಧಾರ ಕೈಗೊಳ್ಳುವ ಮಂಡಳಿಯ ಸದಸ್ಯೆಯಾಗಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಹಿಂದುಳಿದ ವರ್ಗದ ಸಮುದಾಯದಿಂದ ಬೆಳೆದುಬಂದು, ತಮ್ಮ ಅನುಭವ ಹಾಗೂ ಸಾರ್ವಜನಿಕ ಸೇವೆಯ ಮೂಲಕ ಗುರುತಿಸಿಕೊಂಡಿರುವ 61 ವರ್ಷದ ಡಾ. ಸುಧಾ ಯಾದವ್ ಅವರು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲೆಯಾಗಿ ಅಧಿಕಾರ ವಹಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಿದರು.

ಕರ್ನಾಟಕ ಲೋಕಭವನದಲ್ಲಿ ರಾಜ್ಯಪಾಲರನ್ನು ಗೌರವಪೂರ್ವಕವಾಗಿ ಭೇಟಿ ಮಾಡಿದ ಸಂಸದರು, ಕರಾವಳಿಯ ಕೃಷ್ಣನ ನಾಡು ಉಡುಪಿಗೆ ಭೇಟಿ ನೀಡುವಂತೆ ಆತ್ಮೀಯವಾಗಿ ಆಹ್ವಾನಿಸಿದರು. ಆಹ್ವಾನವನ್ನು ಸ್ವೀಕರಿಸಿದ ರಾಜ್ಯಪಾಲರು ಉಡುಪಿಗೆ ಭೇಟಿ ನೀಡುವ ಬಗ್ಗೆ ಸಮ್ಮತಿ ಸೂಚಿಸಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ. ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಹಿರಿಯರಾದ ಸಾಮರಸ್ಯ ವಾದಿರಾಜ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles