Thursday, October 23, 2025

spot_img

ರಾಜ್ಯಾದ್ಯಂತ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ‌ಪೂರ್ವ ಪ್ರಾಥಮಿಕ ತರಗತಿಗಳು ಆರಂಭ: ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: 2024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ.  ರಾಜ್ಯ ಸರ್ಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ತೋರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. 

ಅವರು ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಸಚಿವರು, ಜಿ.ಎಸ್.ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿರುವುದು ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದರು. 

ಶಾಲಾ ಮಕ್ಕಳಿಗೆ ವರ್ಷಕ್ಕೊಮ್ಮೆ ಇಲಾಖೆಯಿಂದಲೇ ಆರೋಗ್ಯ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ.  

ಅಂಗನವಾಡಿಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ನಡೆಸಲು೬ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದ್ದು, 4 ರಿಂದ 5 ಸಾವಿರ ಅಂಗನವಾಡಿಗಳಲ್ಲಿ ಸದ್ಯದಲ್ಲಿಯೇ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು. ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪರಿಶೀಲನಾ ಹಂತದಲ್ಲಿದೆ. ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ಸ್ಥಾಪನೆಗೆ ಶಿವಪುರ, ಕೆರೆಬೆಟ್ಟು, ನಿಟ್ಟೆ, ಉಪ್ಪೂರು, ಸಾಂತೂರು ಹಾಗೂ ಎಲ್ಲೂರು ಗ್ರಾಮಗಳಲ್ಲಿ ಒಟ್ಟು 1207.34 ಎಕ್ರೆ ಜಮೀನನ್ನು ಗುರುತಿಸಲಾಗಿದ್ದು, ಇವು ಪ್ರಗತಿಯ ಹಂತದಲ್ಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. 

ಬಳಿಕ  ಎಸ್ಎಸ್ಎಲ್ಸಿ‌ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಮೌಲಾನಾ ಅಬ್ದುಲ್ ಕಲಾಂ ಅಜಾದ್ ಪ್ರತಿಭಾ ಪುರಸ್ಕಾರ’ ನೀಡಿ ಸಚಿವರು ಗೌರವಿಸಿದರು. ‌ಶಾಲಾ,‌ ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವೀಕ್ಷಿಸಿದರು. ಸುಮಾರು 30 ನಿಮಿಷಗಳ ಕಾಲ ನಡೆದ ವಿದ್ಯಾರ್ಥಿಗಳು ವಿವಿಧ ದೇಶಭಕ್ತಿ ಹಾಡುಗಳಿಗೆ ನೃತ್ಯ ಮಾಡಿದರು. ಬಳಿಕ  ಪಥ ಸಂಚಲನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಶಾಲಾ ತಂಡಗಳಿಗೆ ಸಚಿವರು ಬಹುಮಾನ ವಿತರಿಸಿದರು. 

ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles