Friday, February 20, 2026

spot_img

ರಾಜ್ಯ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕೇಂದ್ರ ಗೃಹ ಸಚಿವಾಲಯದ ಪದಕ

ಉಡುಪಿ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಅವರಿಗೆ, ಉತ್ತಮ ಹಾಗೂ ನಿಷ್ಠಾವಂತ ಸೇವೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ತೋರಿದ ಶ್ರೇಷ್ಠ ಕಾರ್ಯಕ್ಕಾಗಿ ಕೇಂದ್ರ ಸರ್ಕಾರದ ಕೇಂದ್ರ ಗೃಹ ಸಚಿವಾಲಯ ನೀಡುವ ಫೈರ್‌ ಸರ್ವೀಸ್‌ ಮೆಡಲ್‌ ಫಾರ್‌ ಮೇರಿಟೋರೀಯಸ್‌ ಸರ್ವೀಸ್‌ ಪದಕ ಲಭಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕರ ಉಪಸ್ಥಿತಿಯಲ್ಲಿ ಇತ್ತೀಚೆಗೆ ಈ ಗೌರವವನ್ನು ಅವರಿಗೆ ಪ್ರದಾನ ಮಾಡಲಾಗಿದೆ. ಸತೀಶ್ ಅವರು 2005ರಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಗೊಂಡು, ಆರ್.ಎ. ಮುಂಡ್ಕೂರ್ ತರಬೇತಿ ವಿದ್ಯಾಲಯದಲ್ಲಿ ತರಬೇತಿ ಪಡೆದಿದ್ದಾರೆ. 2006ರಲ್ಲಿ ಮೂಡಬಿದ್ರೆ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, 2018ರಲ್ಲಿ ಮೈಸೂರು ಹೆಬ್ಬಾಳ ಅಗ್ನಿಶಾಮಕ ಠಾಣೆಗೆ ಪದೋನ್ನತಿ ವರ್ಗಾವಣೆ ಪಡೆದಿದ್ದಾರೆ. ಪ್ರಸ್ತುತ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸೇವಾವಧಿಯಲ್ಲಿ ಜನರ ಪ್ರಾಣ ಹಾಗೂ ಆಸ್ತಿಗಳ ರಕ್ಷಣೆಗೆ ಮಹತ್ವದ ಕೊಡುಗೆ ನೀಡಿರುವ ಅವರು, ಹಲವಾರು ಪುರಸ್ಕಾರಗಳೊಂದಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನೂ ಪಡೆದಿದ್ದಾರೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles