ಉಡುಪಿ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮದ್ ಅವರು ಏಪ್ರಿಲ್ 20 ರಿಂದ 23 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏ. 20 ರಂದು ಸಂಜೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಏ. 21 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 3.30 ಕ್ಕೆ ಅಲ್ಪಸಂಖ್ಯಾತ ಸಂಘ, ಸಂಸ್ಥೆ, ಶಾಲೆ ಹಾಗೂ ವಸತಿ ನಿಲಯಗಳಿಗೆ ಭೇಟಿ ನೀಡಿ, ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಏ.22 ರಂದು ಬೆಳಗ್ಗೆ 10 ಗಂಟೆಗೆ ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ (ರಿ) ದ ವತಿಯಿಂದ ಆಯೋಜಿಸಲಾದ ಗಣ್ಯರ ಸಮಾವೇಶ ಹಾಗೂ ಒಕ್ಕೂಟದ 25 ನೇ ವರ್ಷದ ವಿಶೇಷ ವಾರ್ತಾ ಸಂಚಯ ಬಿಡುಗಡೆ ಕಾರ್ಯಕ್ರಮ, ಸಂಜೆ 4.30 ಕ್ಕೆ ಮಲ್ಪೆಯ ಸೈಯದನಾ ಅಬೂಬಕರ್ ಸಿದ್ದಿಕ್ ಜಾಮಿಯಾ ಮಸ್ಜಿದ್ ಇಲ್ಲಿ ನಮ್ಮ ನಾಡು ಒಕ್ಕೂಟ ಮತ್ತು ಜಾಮಿಯಾ ಮಸೀದಿ ರವರು ಆಯೋಜಿಸಿರುವ ವೃತ್ತಿ ಮಾರ್ಗದರ್ಶನ (ಕೆರಿಯರ್ ಗೈಡೆನ್ಸ್) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಏ. 23 ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ.