Monday, May 18, 2026

spot_img

ರಾಜ್ಯ ಟಾಪರ್ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದ ಸನ್ಮಾನ

ಉಡುಪಿ : ಕೆಡಿಪಿ ಸಭೆಗೆ ಮುನ್ನ ನಗರದ ಜಿಲ್ಲಾ ಪಂಚಾಯತ್ ಸಭಾಂಗಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮೀಣ ಹಾಗೂ ಸರ್ಕಾರಿ ಶಾಲಾ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ ಎಂದು ಅಭಿನಂದಿಸಿದರು.

ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರದ ಪ್ರೀತಂ ಜಿ ಪೂಜಾರಿ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ಅದೇ ರೀತಿ ಕಲಾ ವಿಭಾಗದಲ್ಲಿ ಸಾಧನೆ ಮಾಡಿದ ಸುಮೇಧಾ, ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದ ರಶ್ಮಿ, ಪ್ರೇರಣಾ ಹೆಗಡೆ ಹಾಗೂ ಅನ್ವಿಕಾ ಅವರನ್ನು ಸನ್ಮಾನಿಸಲಾಯಿತು.

ಕನ್ನಡ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು 625ರಲ್ಲಿ 616 ಅಂಕ ಗಳಿಸಿದ ಅನನ್ಯಾ ಆಚಾರ್ಯ ಅವರನ್ನೂ ಜಿಲ್ಲಾಡಳಿತ ಗೌರವಿಸಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮೀಣ ಹಾಗೂ ಸರ್ಕಾರಿ ಶಾಲಾ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ ಎಂದು ಅಭಿನಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles