Wednesday, March 11, 2026

spot_img

ರಾಜ್ಯ ಬಜೆಟ್ ವಿರೋಧಿಸಿ ಮಾರ್ಚ್ 14ರಂದು ಬಿಜೆಪಿ ಪ್ರತಿಭಟನೆ..

ಉಡುಪಿ: ರಾಜ್ಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಅನುದಾನವನ್ನು ಬಿಡುಗಡೆ ಮಾಡದೇ ಕಡೆಗಣಿಸಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾರ್ಚ್ 14ರಂದು ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ನಗರ ಬಿಜೆಪಿ ವತಿಯಿಂದ ಮಾರ್ಚ್ 14ರಂದು ಸಂಜೆ 4.30ಕ್ಕೆ ಆದರ್ಶ ಆಸ್ಪತ್ರೆ ಎದುರು ಪ್ರತಿಭಟನೆ ಆಯೋಜಿಸಲಾಗಿದೆ. ಆ ದಿನ ಬಿಜೆಪಿ ಕಚೇರಿಯಿಂದ ಆದರ್ಶ ಆಸ್ಪತ್ರೆ ಎದುರಿನ ಖಾಲಿ ಜಾಗದವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನಾ ಸಭೆ ನಡೆಸಲಾಗುತ್ತದೆ. ಸುಮಾರು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ರಾಜ್ಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ನೀಡದೆ ಸರ್ಕಾರವು ಜಿಲ್ಲೆಯ ಅಭಿವೃದ್ಧಿಯನ್ನು ತೀವ್ರವಾಗಿ ಕಡೆಗಣಿಸಿದೆ ಎಂಬ ಆಕ್ರೋಶ ಜಿಲ್ಲೆಯ ಜನರಲ್ಲಿ ಹೆಚ್ಚಾಗಿದೆ. ಕರಾವಳಿ ಭಾಗದ ಜನರು ಆರೋಗ್ಯ, ಶಿಕ್ಷಣ, ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದರೂ ಈ ಬಾರಿ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ವಿಶೇಷ ಯೋಜನೆಗಳು ಅಥವಾ ಮಹತ್ವದ ಅನುದಾನ ಘೋಷಣೆ ಆಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಹೊಸ ಯೋಜನೆಗಳನ್ನು ಘೋಷಿಸುವ ಮಾತಿರಲಿ, ಹಳೆಯ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೂ ಅಥವಾ ನಿರ್ವಹಣೆಗೆ ಸಹ ಅನುದಾನ ನೀಡಿಲ್ಲ ಎಂದು ಆರೋಪಿಸಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನ್ಯಾಯಸಮ್ಮತ ಅನುದಾನ ನೀಡಬೇಕು. ಇಲ್ಲವಾದರೆ ಜನರ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಉಡುಪಿ ಜಿಲ್ಲೆಯ ಅಭಿವೃದ್ಧಿಯನ್ನು ತಡೆಯುವ ಯಾವುದೇ ನಿರ್ಲಕ್ಷ್ಯವನ್ನು ಜನರು ಸಹಿಸುವುದಿಲ್ಲ ಎಂಬ ಸಂದೇಶವನ್ನು ಈ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ನೀಡಲಾಗುತ್ತದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕಿರಣ್ ಕುಮಾರ್, ಪ್ರಭಾಕರ ಪೂಜಾರಿ, ದಿವಾಕರ ಶೆಟ್ಟಿ, ಶ್ರೀವತ್ಸ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles