Sunday, March 16, 2025

spot_img

ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ..

ಉಡುಪಿ : ಸರಕಾರಿ ನೌಕರರು ಪ್ರತಿದಿನ ಕೆಲಸದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ. ನೌಕರರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರು ದೈಹಿಕವಾಗಿ ಸದೃಢರಾಗುವುದರೊಂದಿಗೆ, ಒತ್ತಡರಹಿತವಾಗಿ ಲವಲವಿಕೆಯಿಂದ
ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಬಹುದು. ನೌಕರ ಆರೋಗ್ಯವಾಗಿದ್ದಲ್ಲಿ ಆವರುಗಳ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಸೋಲು-ಗೆಲುವುಗಳ ಬಗ್ಗೆ ಗಮನಹರಿಸದೇ ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಂಡು ಸಕ್ರೀಯವಾಗಿ ಭಾಗವಹಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಪರಸ್ಪರ ಪರಿಚಯವಾಗಿ ಸ್ನೇಹವನ್ನು ಬೆಳೆಸಿಕೊಳ್ಳಬಹುದು. ಇದರಿಂದ ಸರಕಾರಿ ನೌಕರರ ವಲಯದಲ್ಲಿ ಸೌಹಾರ್ದ ವಾತಾವರಣ ನಿರ್ಮಿಸಬಹುದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ್ ಅಂಪಾರು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ
ಆನಂದ ಜತ್ತನ್ನ, ಕಾರ್ಕಳ ತಾಲೂಕು ಅಧ್ಯಕ್ಷ ಬಾಲಕೃಷ್ಣ, ಕುಂದಾಪುರ ತಾಲೂಕು ಅಧ್ಯಕ್ಷ ಡಾ.ನಾಗೇಶ್, ಬೈಂದೂರು ಅಧ್ಯಕ್ಷ ಶೇಖರ
ಪೂಜಾರಿ, ಕಾಪು ಅಧ್ಯಕ್ಷ ಬಸವರಾಜ್, ಹೆಬ್ರಿ ಅಧ್ಯಕ್ಷ ತಹಶೀಲ್ದಾರ್ ಪ್ರಸಾದ್, ಕ್ರೀಡಾ ಕಾರ್ಯದರ್ಶಿ ದಿವಾಕರ ನಾಯ್ಕಾ, ದೀಪಾ,
ಜಿಲ್ಲೆಯ ವಿವಿಧ ಇಲಾಖೆಗಳ ಸರಕಾರಿ ನೌಕರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಸ್ವಾಗತಿಸಿ, ಸತೀಶ್ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರೆ, ಕೋಶಾಧಿಕಾರಿ ದಯಾನಂದ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles