Friday, October 24, 2025

spot_img

ರಾಷ್ಟ್ರದ ಗೌರವ ಕಾಪಾಡುವಲ್ಲಿ ಚೆನ್ನಮ್ಮರ ಬದುಕು ಸಮರ್ಪಣೆ : ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ : ರಾಷ್ಟ್ರ ಭಕ್ತಿ, ಶೌರ್ಯ, ಶ್ರದ್ಧೆ, ಹೋರಾಟಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚೆನ್ನಮ್ಮ ಎನ್ನುವುದು ನಮ್ಮೆಲ್ಲರ ಹೆಮ್ಮೆ. ಬೆಳಗಾವಿ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮ ರಾಷ್ಟ್ರದ ಗೌರವವನ್ನು ಕಾಪಾಡುವಲ್ಲಿ ತಮ್ಮ ಬದುಕನ್ನು ಸಮರ್ಪಣೆ ಮಾಡಿದರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಿತ್ತೂರು ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡಿದರು.

ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಚೆನ್ನಮ್ಮ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಸಂಘಟನ ಶಕ್ತಿಯನ್ನು ಬೆಳೆಸಿ, ಭಾರತದ ಸ್ವಾತಂತ್ಸ್ಯದ ಹೋರಾಟದ ಪ್ರಥಮ ಮಹಿಳೆಯರ ಸಾಲಿಗೆ ಸೇರ್ಪಡೆಗೊಂಡು ಆದರ್ಶಮಯ ವ್ಯಕ್ತಿಯಾಗಿ, ಶಕ್ತಿಯಾಗಿ, ಮಹಿಳೆಯರಿಗೆ ಸ್ಫೂರ್ತಿಯಾದರು ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಎ ಸುವರ್ಣ, ದೇಶ ಕಟ್ಟುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಚಾರ ಹಾಗೂ ಬದುಕಿದ ರೀತಿ ಅವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕು ಎಂದರು. ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ್ ಯು.ಸಿ ಕಿತ್ತೂರು ರಾಣಿ ಚೆನ್ನಮ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಚಿಕ್ಕಮಠ, ಜಗನ್ನಾಥ ಪಣಸಾಲೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ಬಿ ಕೋಟ್ಯಾನ್ ನಿರೂಪಿಸಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles