Monday, June 22, 2026

spot_img

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ: ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ಉಡುಪಿ : ರಾಷ್ಟ್ರೀಯ ಹೆದ್ದಾರಿ 169Aರ ಉಡುಪಿ ಕರಾವಳಿ ಬೈಪಾಸ್‌ನಿಂದ ಮಣಿಪಾಲ ಸಿಂಡಿಕೇಟ್ ಸರ್ಕಲ್‌ವರೆಗಿನ ಅಗತ್ಯ ಮೂಲಸೌಕರ್ಯ ಕಾಮಗಾರಿಗಳ ಕುರಿತು ಶಾಸಕ ಯಶ್ ಪಾಲ್ ಸುವರ್ಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಉಡುಪಿ ನಗರಸಭೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಕರಾವಳಿ ಜಂಕ್ಷನ್‌ನಿಂದ ಬನ್ನಂಜೆ ನಾರಾಯಣಗುರು ಸರ್ಕಲ್‌ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ, ಬನ್ನಂಜೆ ಜಂಕ್ಷನ್ ಅಭಿವೃದ್ಧಿ, ರಸ್ತೆಯ ಬದಿಗಳಲ್ಲಿ ಇಂಟರ್‌ಲಾಕ್ ಮರುಅಳವಡಿಕೆ, ಕಡಿಯಾಳಿ-ಕುಂಜಿಬೆಟ್ಟು ಭಾಗದಲ್ಲಿ ಚರಂಡಿ ನಿರ್ಮಾಣ, ಶಾರದಾ ಕಲ್ಯಾಣ ಮಂಟಪ ಜಂಕ್ಷನ್ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಇದೇ ವೇಳೆ ಎಂ.ಜಿ.ಎಂ. ಕಾಲೇಜು ಬಳಿಯಿಂದ ಇಂದ್ರಾಳಿ ರೈಲ್ವೆ ನಿಲ್ದಾಣ ಸಂಪರ್ಕ ರಸ್ತೆಯವರೆಗೆ ಇಂಟರ್‌ಲಾಕ್ ಅಳವಡಿಕೆ, ಲಕ್ಷ್ಮೀಂದ್ರನಗರದಲ್ಲಿ ವ್ಯವಸ್ಥಿತ ಚರಂಡಿ ನಿರ್ಮಾಣ, ಇಂದ್ರಾಳಿ ಸೇತುವೆ ಬಳಿ ಶಾಲೆಗೆ ಸಂಪರ್ಕಿಸುವ ಸರ್ವಿಸ್ ರಸ್ತೆ ನಿರ್ಮಾಣ ಹಾಗೂ ಅಗತ್ಯ ಸ್ಥಳಗಳಲ್ಲಿ ಬಸ್ ಶೆಲ್ಟರ್‌ಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಕ್ಷಣ ಅಂದಾಜು ಪಟ್ಟಿ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಉಡುಪಿ ನಗರಸಭೆಯ ಮೂಲಕ ಈಗಾಗಲೇ ಮಂಜೂರಾಗಿರುವ ಎಂ.ಜಿ.ಎಂ. ಕಾಲೇಜು ಮುಂಭಾಗ ಹಾಗೂ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಬಳಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸುವಂತೆ ನಗರಸಭೆ ಪೌರಾಯುಕ್ತರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸದಸ್ಯರಾದ ಹರೀಶ್ ರಾಮ್ ಬನ್ನಂಜೆ, ಬಾಲಕೃಷ್ಣ ಶೆಟ್ಟಿ ನಿಟ್ಟೂರು, ಗಿರೀಶ್ ಅಂಚನ್, ಟಿ.ಜಿ. ಹೆಗ್ಡೆ, ಸ್ಥಳೀಯ ಮುಖಂಡರಾದ ಸತೀಶ್ ಕುಲಾಲ್ ಕಡಿಯಾಳಿ, ಸತೀಶ್ ಭಾಗವತ್, ಧನ್ಯವಂತ ಪ್ರಭು ಬನ್ನಂಜೆ, ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಇಂಜಿನಿಯರ್ ಕಾರ್ತಿಕ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಮಂಜನ್ ಗೌಡ, ನವೀನ್ ರಾಜ್, ಶಶಿಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles