Saturday, June 21, 2025

spot_img

ರಾಷ್ಟ್ರ ಮಟ್ಟದ ಟ್ರೆಯಥ್ಲಾನ್ ಈಜು ಸ್ಪರ್ಧೆಯಲ್ಲಿ ಗೋಪಾಲ್ ಖಾರ್ವಿಗೆ ಚಿನ್ನದ…

ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ ಕನ್ಯಾನ ಇವರು, ತಪಸ್ಯ ಫೌಂಡೇಶನ್, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಐ. ಡಿ. ಎಫ್. ಸಿ. ಫಸ್ಟ್ ಬ್ಯಾಂಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮಂಗಳೂರಿನ ತಣ್ಣೀರು ಬಾವಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಟ್ರೆಯಥ್ಲಾನ್ ಸ್ಪರ್ಧೆಯ ಒಂದು ಕಿ.ಮೀ. ಸಮುದ್ರ ಈಜು ಸ್ಪರ್ಧೆಯಲ್ಲಿ 16:02 ನಿಮಿಷ ಈಜಿ ಗೋಪಾಲ್ ಖಾರ್ವಿಯವರು ಚಿನ್ನದ ಪದಕ ಪಡೆದಿರುತ್ತಾರೆ.

ಇವರು ಉಡುಪಿಯ ಅಜ್ಜರಕಾಡು ಈಜು ಕೊಳದ ತರಬೇತುದಾರರಾಗಿರುತ್ತಾರೆ. 2013 ರಲ್ಲಿ ಕೈ ಕಾಲುಗಳನ್ನು ಕೋಳದಿಂದ ಬಂಧಿಸಿ ಅರಬ್ಬಿ ಸಮುದ್ರದಲ್ಲಿ 3.71 ಕಿ.ಮೀ. ಈಜಿ ಗಿನ್ನಿಸ್ ವಿಶ್ವ ದಾಖಲೆ  ಮಾಡಿದ್ದಾರೆ. ಗೋಪಾಲ್ ಖಾರ್ವಿ ಕೋಡಿ ಕನ್ಯಾನ ಇವರಿಗೆ ಭಾರತ ಮತ್ತು ಅಮೇರಿಕನ್ ವಿಶ್ವವಿದ್ಯಾಲಯವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳಾದ “BEST SPORTS ACHIVER AWARD” ಮತ್ತು “”CERTIFICATE OF EXCELLENCE AWARD” ನೀಡಿ ಗೌರವಿಸಿದ್ದು, ಈ ಹಿಂದೆ ಗೋಪಾಲ್ ಖಾರ್ವಿಯವರು ಕರ್ನಾಟಕದ ಅತ್ಯುತ್ತಮ ಪ್ರಶಸ್ತಿಗಳಾದ ಕರ್ನಾಟಕ ರಾಜ್ಯೋತ್ಸವ, ಹಾಗೂ ಕರ್ನಾಟಕ ಕ್ರೀಡಾರತ್ನ’ ಪ್ರಶಸ್ತಿಯನ್ನು, ರಾಜ್ಯ ಮಟ್ಟದ ಸಂದೇಶ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು ಇವರ ಈ ಸಾಧನೆಯನ್ನು ಮನಗಂಡ ರಾಜ್ಯ ಸರಕಾರವು ಕರ್ನಾಟಕದ ಕೊಂಕಣಿ 9ನೇ ತರಗತಿಯ ಪಠ್ಯ ಪುಸ್ತಕದಲ್ಲಿ  ಜೀವನ ಚರಿತ್ರೆ ಗೋಪಾಲ್ ಖಾರ್ವಿ ಎಂಬ ಪಾಠವನ್ನು ಪ್ರಕಟಿಸಿರುವುದು ಅವರ ಸಾಧನೆಗೆ ಸಂದ ಅತ್ಯಂತ ಗೌರವಯುತ ಪ್ರಶಸ್ತಿಗಳೊಂದು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles