Monday, March 2, 2026

spot_img

ರಾ.ಹೆ. ಕಾಮಗಾರಿ: ಹಾನಿಗೊಳಗಾದ ನೀರು ಪೈಪ್‌ಲೈನ್ ದುರಸ್ತಿ ಮಾಡಿ: ಸಂಸದ ಕೋಟ

ಉಡುಪಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್‌ಗಳು ಹಾನಿಗೊಂಡಿರುವ ಹಿನ್ನೆಲೆಯಲ್ಲಿ, ಅವುಗಳ ದುರಸ್ತಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆ ಮಧ್ಯಭಾಗದಲ್ಲಿರುವ ಪೈಪ್‌ಲೈನ್‌ಗಳ ಬದಲಿಗೆ ಸರ್ವೀಸ್ ರಸ್ತೆಯ ಬಾಕಿ ಜಾಗದಲ್ಲಿ ಹೊಸ ಪೈಪ್‌ಲೈನ್ ಅಳವಡಿಸುವುದು ಸೂಕ್ತ ಎಂದು ತಿಳಿಸಿದರು. ದುರಸ್ತಿ ಹಾಗೂ ಹೊಸ ಪೈಪ್‌ಲೈನ್ ಕಾಮಗಾರಿಗೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ ಹಾಗೂ ಎ. ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮೀಷನರ್ ರಶ್ಮಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles