ಉಡುಪಿ : ಪ್ರಕೃತಿ ವಿಕೋಪ ಮತ್ತು ತುರ್ತು ಅಗತ್ಯದ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಲ್ಲಿಸುತ್ತಿರುವ ಸೇವೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಈ ದೃಷ್ಟಿಯಿಂದ ರೆಡ್ ಕ್ರಾಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರೂ ರೆಡ್‌ಕ್ರಾಸ್ಸಿನ ಮೂಲತತ್ವಗಳನ್ನು ಅರ್ಥಮಾಡಿಕೊಳ್ಳುವುದು ಅತಿ ಅಗತ್ಯವಿದ್ದು ಈ ತರಬೇತಿ ಮಹತ್ವದ್ದಾಗಿದೆ ಎಂದು ಕುಂದಾಪುರ ರೆಡ್‌ಕ್ರಾಸ್ ಸಭಾಪತಿಗಳಾದ ಜಯಕರ ಶೆಟ್ಟಿ ಹೇಳಿದರು.

ಅವರು ಉಡುಪಿ ರೆಡ್‌ಕ್ರಾಸ್ ಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಅಧಿಕಾರಿಗಳ ಒಂದು ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿಯವರು ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಅನುಷ್ಠಾನದ ಮಹತ್ವವನ್ನು ವಿವರಿಸಿದರು.

ರೆಡ್‌ಕ್ರಾಸ್ ಸಂಯೋಜಕಿ ಡಾ. ದಿವ್ಯಾ ಎಮ್. ಎಸ್.ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಟಿ. ಚಂದ್ರಶೇಖರ್ ಕುಂದಾಪುರ ತಾಲೂಕು ರೆಡ್‌ಕ್ರಾಸ್ ಖಚಾಂಚಿ ಶಿವರಾಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು. ರೆಡ್ ಕ್ರಾಸ್ ಖಚಾಂಚಿ ರಮಾದೇವಿ ವಂದಿಸಿದರು. ರೆಡ್‌ಕ್ರಾಸ್ ಸದಸ್ಯ ರಾಘವೇಂದ್ರ ಕರ್ವಾಲು ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ಮಟ್ಟದ ವಿವಿಧ ಕಾಲೇಜಿನ 40 ರೆಡ್‌ಕ್ರಾಸ್ ಅಧಿಕಾರಿಗಳು ಭಾಗವಹಿಸಿದ್ದರು.