Saturday, April 4, 2026

spot_img

ರೌಡಿ ಶೀಟರ್ ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಬಂಧನ..

ಉಡುಪಿ : ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಆದೇಶ ಹೊರಡಿಸಲಾಗಿದೆ. ಪೊಲೀಸ್ ಅಧೀಕ್ಷಕರ ವರದಿ ಆಧಾರವಾಗಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಏಪ್ರಿಲ್ 4ರಂದು ಈ ಆದೇಶ ಹೊರಡಿಸಿದ್ದಾರೆ. ಬಂಧಿತನು ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ನಿವಾಸಿಯಾಗಿದ್ದು, ಸದ್ಗುಣ ನಿವಾಸದಲ್ಲಿ ವಾಸವಾಗಿದ್ದಾನೆ.

ಆರೋಪಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ 4, ದರೋಡೆ 1, ಹಲ್ಲೆ 3, ಅಕ್ರಮ ಕೂಟ 1, ಜೂಜಾಟ 1 ಸೇರಿದಂತೆ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಒಂದರಲ್ಲಿ ಸಜೆ ಆಗಿದ್ದು, 7 ಪ್ರಕರಣಗಳಲ್ಲಿ ಖುಲಾಸೆಯಾಗಿದ್ದು, ಒಂದು ಪ್ರಕರಣ ನ್ಯಾಯಾಂಗ ವಿಚಾರಣೆಯಲ್ಲಿದೆ. ಇನ್ನೂ 2 ಪ್ರಕರಣಗಳು ತನಿಖೆಯಲ್ಲಿವೆ.

ಸಾರ್ವಜನಿಕ ಶಾಂತಿ ಹಾಗೂ ಭದ್ರತೆ ದೃಷ್ಟಿಯಿಂದ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಆದೇಶಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles