Thursday, November 5, 2026

spot_img

ವಕೀಲರ ಮೇಲಿನ ಹಲ್ಲೆ ಖಂಡಿಸಿ ಉಡುಪಿಯಲ್ಲಿ ನ್ಯಾಯಾಲಯ ಕಲಾಪ ಬಹಿಷ್ಕಾರ

ಉಡುಪಿ: ರಾಜ್ಯದಲ್ಲಿ ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಕೀಲರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿ ಉಡುಪಿಯಲ್ಲಿ ವಕೀಲರು ಇಂದು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿದರು.

ಈ ಸಂದರ್ಭದಲ್ಲಿ ವಕೀಲರ ನಿಯೋಗವು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಹಶೀಲ್ದಾರರ ಮೂಲಕ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು. ನ್ಯಾಯವಾದಿಗಳ ವೃತ್ತಿ ಭದ್ರತೆ ಮತ್ತು ಸುರಕ್ಷತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ವಕೀಲರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರು ಹಾಗೂ ಯು-ಆಕ್ಟ್ ಸಂಸ್ಥಾಪಕರಾದ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ, ಉಡುಪಿ ವಕೀಲರ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ ಶೆಟ್ಟಿಗಾರ್, ಆನಂದ ಮಡಿವಾಳ, ಅಖಿಲ್ ಹೆಗ್ಡೆ ಸೇರಿದಂತೆ ಹಲವು ವಕೀಲರು ನಿಯೋಗದಲ್ಲಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles