ಉಡುಪಿ : ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಆರೋಪಿಯಾಗಿರುವ ಕಿಶೋರ್ (24), ವಿಜಯ ಅವರ ಪುತ್ರ, ಉಪ್ಪೂರು ಗ್ರಾಮದ ಲಕ್ಷ್ಮೀನಗರ ನಿವಾಸಿ, ಕಳೆದ ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಬ್ರಹ್ಮಾವರ, ಕುಂದಾಪುರ ಹಾಗೂ ಉಡುಪಿ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.

ಆರೋಪಿಯನ್ನು ಪೊಲೀಸ್ ರು ಬುಧವಾರ ಬ್ರಹ್ಮಾವರದ ಕೊಳಲಗಿರಿಯ ಲಕ್ಷ್ಮೀನಗರದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಮಾ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.



