Friday, October 9, 2026

spot_img

ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ ಬೆಳೆಸುವಲ್ಲಿ ಎನ್‌ಎಸ್‌ಎಸ್ ಪ್ರಮುಖ ಪಾತ್ರ: ನಿರುಪಮ ಪ್ರಸಾದ್ ಶೆಟ್ಟಿ

ಉಡುಪಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಕರ್ತವ್ಯಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಮಹತ್ವದ ಪಾತ್ರ ವಹಿಸುತ್ತದೆ. ಇಂದಿನ ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಿರುಪಮ ಪ್ರಸಾದ್ ಶೆಟ್ಟಿ ಹೇಳಿದರು. ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಗುರುವಾರ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಆವರಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿ, ಸ್ವಚ್ಛತೆ ಎಂಬುದು ನಿರಂತರವಾಗಿ ಪಾಲಿಸಬೇಕಾದ ಅಭ್ಯಾಸವಾಗಿದೆ. ಪರಿಸರವನ್ನು ಸ್ವಚ್ಛವಾಗಿಡುವುದರ ಜತೆಗೆ ಮನಸ್ಸಿನಲ್ಲಿಯೂ ಸ್ವಚ್ಛ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಯುವಜನರು ಜಾತಿ, ಮತ, ಭೇದಗಳನ್ನು ಮರೆತು ಒಗ್ಗಟ್ಟಿನಿಂದ ಬದುಕುವ ಮೂಲಕ ಸಮಾಜದ ಪ್ರಗತಿಗೆ ಕೊಡುಗೆ ನೀಡಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಪರಿಣಾಮಕಾರಿ ವೇದಿಕೆಯಾಗಿದೆ. ಇಂತಹ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಯುವಜನರು ಮಾನಸಿಕವಾಗಿ ಸದೃಢರಾಗುವುದರ ಜತೆಗೆ ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ದಿನೇಶ್ ಹಿಂಬಾಳೆ ಮಾತನಾಡಿ, ಎನ್‌ಎಸ್‌ಎಸ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಬಹುದು. ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳುತ್ತಾರೆ ಎಂದರು.

ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ಇಂದಿರಾ ಮಾತನಾಡಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶುಭಗೀತಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಉಪನ್ಯಾಸಕ ಗಂಗಾಧರ್ ವಿ.ಎ. ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರೇಮಾ ಬಿ. ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕಿ ಡಾ. ಉಷಾ, ಡಯಟ್‌ನ ಹಿರಿಯ ಉಪನ್ಯಾಸಕ ಸುರೇಂದ್ರ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಶ್ರೀಲತಾ, ಕಾಲೇಜಿನ ಉಪನ್ಯಾಸಕರು ಹಾಗೂ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles