Monday, March 2, 2026

spot_img

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಾಪು ಮಾರಿಯಮ್ಮ ದೇವಿಯ ದರ್ಶನ

ಉಡುಪಿ : ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳಕ್ಕೆ ಆಗಮಿಸಿದ ಸಭಾಪತಿಗಳನ್ನು ದೇವಳದ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸಾಂಪ್ರದಾಯಿಕವಾಗಿ ಸ್ವಾಗತಿಸಿ ಗೌರವಿಸಿದರು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.

 ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ, ಇದು ನನ್ನ ಜೀವನದ ಅತ್ಯಂತ ಶ್ರೇಷ್ಠ ದಿನ. ಇಂತಹ ಐತಿಹಾಸಿಕ ಮತ್ತು ಚರಿತ್ರೆಯುಳ್ಳ ದೇವಾಲಯಕ್ಕೆ ಭೇಟಿ ನೀಡಿರುವುದು ನನ್ನ ಪೂರ್ವಜನ್ಮದ ಪುಣ್ಯ. ಕೋಟಿ ಹಣ ಕೊಟ್ಟರೂ ಸಿಗದಂತಹ ಮಾನಸಿಕ ನೆಮ್ಮದಿಯನ್ನು ಇಲ್ಲಿ ಅನುಭವಿಸಿದ್ದೇನೆ. ರಾಜ್ಯದಲ್ಲಿಯೂ, ದೇಶದಲ್ಲಿಯೂ ಎಲ್ಲಿಯೂ ನಡೆಯದ ರೀತಿಯಲ್ಲಿ ಈ ದೇಗುಲದ ಜೀರ್ಣೋದ್ಧಾರ ನಡೆದಿದೆ. ಅಮ್ಮ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕ ಹಾಗೂ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಹಾಗೂ ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಹುಬ್ಬಳ್ಳಿ–ಧಾರವಾಡ ಸಮಿತಿಯ ಸಂಚಾಲಕ ಸುಗ್ಗಿ ಸುಧಾಕರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಮನೋಹರ ರಾವ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles