Friday, June 13, 2025

spot_img

ವೇದದ ಸಾರವನ್ನು ಜಗತ್ತಿಗೆ ಸಾರಿದವರು ಶಂಕರಾಚಾರ್ಯರು : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ : ಸಮಾಜದ ಏಳಿಗೆಗಾಗಿ ಹಾಗೂ ಧರ್ಮದ ರಕ್ಷಣೆಗಾಗಿ ದೇಶದಾದ್ಯಂತ ಸಂಚರಿಸಿ, ವೇದದ ಸಾರವನ್ನು ಜಗತ್ತಿಗೆ ಸಾರಿರುವ ಶಂಕರಾಚಾರ್ಯರ ಜೀವನ ಸಾಧನೆ ಪ್ರತಿಯೊಬ್ಬರಿಗೂ ದಾರಿದೀಪವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯಯ ಭಾವಚಿತ್ರಕ್ಕೆ ಪುಸ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಅದ್ವೈತ ಮತದ ಪ್ರತಿಪಾದಕ ಆದಿ ಶಂಕರಾಚಾರ್ಯರು. ನಂಬಿಕೆ ಮತ್ತು ಸಮಗ್ರತೆ ಕ್ಷೀಣಿಸುತ್ತಿದ್ದ ಸಂದರ್ಭದಲ್ಲಿ ಭಾರತದ ಆಧ್ಯಾತ್ಮಿಕ ಪರಂಪರೆಗೆ ರಕ್ಷಣೆ ನೀಡಿದ ಇವರು, ಮನುಷ್ಯ ತನ್ನನ್ನು ತಾನು ಅರಿತುಕೊಂಡು, ಸಮಾಜ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಹೊಂದಾಣಿಕೆ ಜೀವನ ನಡೆಸುವುದರೊಂದಿಗೆ ಸಮಾಜದ ಅಭಿವೃದ್ಧಿ ಸಾಧಿಸಬಹುದಾದ ದಾರಿಯನ್ನು ತೋರಿಸಿಕೊಟ್ಟಿದ್ದಾರೆ.ಶಂಕರಾಚಾರ್ಯರು ನಡೆದು ಬಂದ ಹಾದಿಯನ್ನು ನಾವೆಲ್ಲರೂ ಅನುಸರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸೋಣ ಎಂದರು.

ಶೃಂಗೇರಿ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ವಾಗೀಶ ಎಸ್ ಶಾಸ್ತ್ರೀ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ  ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ ರಾವ್ , ನಗರಸಭಾ ಸದಸ್ಯರಾದ ಮಂಜುನಾಥ್ ಶೆಟ್ಟಿಗಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಂಕರ ತತ್ವ ಪ್ರಸಾರ ಅನುಯಾಯಿಗಳು, ವಿವಿಧ ಸಮುದಾಯದ ಮುಖಂಡರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ತೇಜೇಶ್ ಬಂಗೇರ ನಿರೂಪಿಸಿದರೆ, ವಿಶ್ವನಾಥ ಶ್ಯಾನುಭೋಗ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles