ಉಡುಪಿ : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಎನ್ನೆಸೆಸ್ ಘಟಕದ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಆಚರಿಸಲಾಯಿತು. ವಿದ್ಯಾರ್ಥಿ ಧರ್ಮಣ್ಣ ಗ್ರಂಥಾಲಯ ಪಿತಾಮಹ ರಂಗನಾಥ್ ರವರ ಪರಿಚಯ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸುರೇಖಾ ರವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವಜನತೆ ಮೊಬೈಲ್ ನ ದಾಸರಾಗಿದ್ದು ಗ್ರಂಥಾಲಯದಲ್ಲಿ ಕುಳಿತು ಓದುವುದು ಕಡಿಮೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ರೋಹಿತ್ ಅಮೀನ್, ಉಪ ಪ್ರಾಂಶುಪಾಲರಾದ ಡಾ.ಪ್ರೀತಿ ಹರೀಶರಾಜ್ ಕಾನೂನು ವಿಭಾಗದ ಮುಖ್ಯಸ್ಥರಾದ ಡಾ. ಜಯಮೋಲ್, ಸಹಾಯಕ ಗ್ರಂಥಪಾಲಕರಾದ ಅನಂತರಾಮ್ ನಾಯಕ್ ಹಾಗೂ ಎಲ್ಲಾ ಬೋದಕ ಮತ್ತು ಬೋದಕೇತರ ಸಿಬ್ಬಂದಿಗಳು ಹಾಜರಿದ್ದರು.

ಕಾರ್ಯಕ್ರಮವನ್ನು ಎನ್ನೆಸೆಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಸಿ.ಬಿ. ನವೀನ್ ಚಂದ್ರ ಮತ್ತು ಅಮೋಘ ಗಾಡ್ಕರ್ ಸಂಯೋಜಿಸಿದರು. ವಿದ್ಯಾರ್ಥಿ ಪ್ರಸನ್ನ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎನ್ನೆಸೆಸ್ ಕಾರ್ಯದರ್ಶಿಗಳಾದ ಸಮೀರ್, ಸಂದೇಶ್, ರಕ್ಷಿತ ಮತ್ತು ಅಂಕಿತಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತಿ ಇದ್ದರು.



