ಉಡುಪಿ : ಹದಿಹರೆಯದ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಎನ್ ಎಸ್ ಎಸ್ ಪ್ರಧಾನ ಪಾತ್ರ ವಹಿಸುತ್ತದೆ ಎಂದು ಶ್ರೀಪತಿ ಅಡಿಗ ಹೇಳಿದರು. ಅವರು ಮಂದಾರ್ತಿಯ ನಿಸರ್ಗ ಸಭಾಂಗಣದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ ಇಲ್ಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಹೆಗ್ಗುಂಜೆ ಗ್ರಾಮಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಇವರು ಅಧ್ಯಕ್ಷತೆ ವಹಿಸಿದ್ದರು. ಎನ್ ಎಸ್ ಎಸ್ ವಿಭಾಗಾಧಿಕಾರಿಗಳಾದ ಶ್ರೀಮತಿ ಸವಿತಾ ಎರ್ಮಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸ್ವಯಂಸೇವಕರು ಪ್ರಾರ್ಥಿಸಿದರು. ಘಟಕದ ನಾಯಕ ರೋಹಿತ ಕುಮಾರ್ ಸ್ವಾಗತಿಸಿದರು. ಭೂಮಿಕ ವಂದಿಸಿದರು. ಶ್ರೀಮತಿ ಸವಿತಾ ಎರ್ಮಾಳ್ ಕಾರ್ಯಕ್ರಮ ನಿರೂಪಿಸಿದರು.


