Wednesday, March 4, 2026

spot_img

ಶಂಕರನಾರಾಯಣ ಸಮೀಪ ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು..

ಉಡುಪಿ : ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ಮನೆಯ ಆವರಣದಲ್ಲಿ ತೆಂಗಿನ ಕಾಯಿ ಕೊಯ್ಯುವ ವೇಳೆ ಕಾಲು ಜಾರಿ ಮರದಿಂದ ಕೆಳಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ರವೀಂದ್ರನಾಥ ಶೆಟ್ಟಿ (70) ಮೃತಪಟ್ಟವರು

ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ರವೀಂದ್ರನಾಥ ಶೆಟ್ಟಿ ಅವರು ಮಂಗಳವಾರದಂದು ಬೆಳಿಗ್ಗೆ ಮನೆಯ ತೆಂಗಿನಮರದಿಂದ ಕಾಯಿ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವ ಉಂಟಾಗಿದ್ದು, ನಂತರ ಅವರನ್ನು ತಕ್ಷಣವೇ ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ಯಿದು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು.

ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 1.54 ಕ್ಕೆ ಅವರು ನಿಧನರಾಗಿದ್ದಾರೆ. ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles