Monday, March 2, 2026

spot_img

ಶಾಲಾ ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಸಾವು, ಸಹಸವಾರ ಗಂಭೀರ ಗಾಯ

ಉಡುಪಿ: ಶಾಲಾ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಪೆರ್ಡೂರು ಬಳಿ ನಡೆದಿದೆ. ಗಣೇಶ್ ಬಸ್‌ ಢಿಕ್ಕಿ ಹೊಡೆದು ಮೃತಪಟ್ಟ ಬೈಕ್‌ ಸವಾರ.

 ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ, ದೊಂಡರಂಗಡಿ ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದ ಅಮೃತ ಭಾರತಿ ಶಾಲೆಯ ಬಸ್, ಎದುರಿಗೆ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಣೇಶ್ ಹಾಗೂ ಸಹಸವಾರ ಸುದರ್ಶನ್ ಬೈಕ್ ಸಹಿತ ರಸ್ತೆಗೆ ಬಿದ್ದಿದ್ದಾರೆ. ಅಪಘಾತದಿಂ ಗಂಭೀರ ವಾಗಿ ಗಾಯಗೊಂಡಿದ್ದ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಹಸವಾರ ಸುದರ್ಶನ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles