ಉಡುಪಿ : ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕುಂದಾಪುರ ತಾಲೂಕಿನ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು, ಮಕ್ಕಳು ಶಿಕ್ಷಣದ ಜೊತೆಗೆ ಕ್ರೀಡೆಯನ್ನೂ ಅಳವಡಿಸಿಕೊಂಡರೆ ಉತ್ತಮ ಶಿಸ್ತು, ತಾಳ್ಮೆ ಮತ್ತು ನಾಯಕತ್ವ ಗುಣ ಬೆಳೆಸಿಕೊಂಡು ಸಮಾಜದ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೋಭಾ ಶೆಟ್ಟಿ, ತಾಲೂಕು ಕ್ರೀಡಾಧಿಕಾರಿ ಕುಸುಮಕರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಜಿಲ್ಲೆಯ ವಿವಿಧ ಶಾಲೆಗಳ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಿ, ಮುಂದಿನ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಶಾಸಕರು ಪ್ರೇರಣೆ ನೀಡಿದರು.



