Sunday, March 16, 2025

spot_img

ಶ್ರೀ ಕೃಷ್ಣ ಮಠಕ್ಕೆ ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್ ಸಾವಂತ್ ಭೇಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್ ಸಾವಂತ್ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ಬಳಿಕ ಪೂಜ್ಯ ಪರ್ಯಾಯ ಶ್ರೀಪಾದರಿಂದ ಆಶೀರ್ವಾದ ಪಡೆದರು.

ಈ ಸಂದರ್ಭ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯ ಜತೆಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆಯನ್ನು ಪಡೆದರು. ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್ ಸಾವಂತ್ಮ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಬಳಿಕ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಎರಡನೇ ಮುಖ್ಯಮಂತ್ರಿ.

ಈ ಸಂದರ್ಭ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರುರಾಜ್ ಗಂಟೆಹೊಳೆ, ಪ್ರಸಾದ್ ನೇತ್ರಾಲಯ ವೈದ್ಯಕೀಯ ನಿರ್ದೇಶಕ ಡಾ| ಕೃಷ್ಣಪ್ರಸಾದ್ ಕೂಡ್ಲು, ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles