ಉಡುಪಿ : ಜಿಲ್ಲಾ ಪಂಚಾಯತ್ ನ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನೆಡೆಯಿತು.

ಸಂಸದರು ಸಂಜೀವಿನಿ ಸ್ವ ಸಹಾಯ ಗುಂಪು ಹಾಗೂ ಒಕ್ಕೂಟಗಳ ಬಲವರ್ಧನೆ, ಸಂಜೀವಿನಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ವಿವಿಧ ಸ್ವ ಉದ್ಯೋಗ ಹಾಗೂ ಪ್ರವಾಸೋದ್ಯಮ ಚಟುವಟಿಕೆ, ಹಣಕಾಸು ಸೇರ್ಪಡೆ ಹಾಗೂ ವಿವಿಧ ವಿಷಯಗಳ ಬಗ್ಗೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಯೋಜನಾ ನಿರ್ದೇಶಕರಾದ ವಿಜಯ್ ಕುಮಾರ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ವಿಷಯ ನಿರ್ವಹಕ ಅನಂತ ಕ್ರಷ್ಣ, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಡಾ ಸೌಮ್ಯ ಕುಮಾರಿ, ಯತೀಶ್, ರವಿ, ಶಿವಾನಂದ್ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.
