Wednesday, April 8, 2026

spot_img

ಸಂಸದರ ಪ್ರದೇಶಾಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ: ತ್ವರಿತ ಅನುಷ್ಠಾನಕ್ಕೆ ಕೋಟ ಸೂಚನೆ..

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ (ಎಂ.ಪಿ.ಎಲ್.ಎ.ಡಿ) ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. 2024-25 ಹಾಗೂ 2025-26ನೇ ಸಾಲಿನ ನಿಧಿ ಅಡಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಸಂಸದರು, ಪ್ರಸ್ತುತ ಸ್ಥಿತಿ, ಬಾಕಿ ಕಾಮಗಾರಿಗಳು ಹಾಗೂ ಎದುರಾಗುತ್ತಿರುವ ಅಡಚಣೆಗಳ ಕುರಿತು ಅಧಿಕಾರಿಗಳಿಂದ ವಿವರಗಳನ್ನು ಪಡೆದುಕೊಂಡರು.

ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಎಲ್ಲಾ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ವಿಶೇಷವಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಮತ್ತು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಬಾಕಿ ಉಳಿದಿರುವ ಕಾಮಗಾರಿಗಳ ತಾಂತ್ರಿಕ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಅನುಷ್ಠಾನಕ್ಕೆ ತರಲು ನಿರ್ದೇಶಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸೇರಿದಂತೆ ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles