Monday, March 2, 2026

spot_img

ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮುಚ್ಚುವ ನಿರ್ಧಾರ ಹಿಂಪಡೆಯಲಿ: ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಜನಸಂಖ್ಯೆ ಆಧಾರದ ಮೇಲೆ ಸಮುದಾಯ ಆರೋಗ್ಯ ಕೇಂದ್ರಗಳು (ಸಿಎಚ್‌ಸಿ) ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ)ಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರದಿಂದ ಗ್ರಾಮೀಣ, ಅರಣ್ಯ ಮತ್ತು ಹಿಂದುಳಿದ ಪ್ರದೇಶಗಳ ಸಾವಿರಾರು ಜನರು ಮೂಲಭೂತ ಆರೋಗ್ಯ ಸೇವೆಯಿಂದ ವಂಚಿತರಾಗುವ ಆತಂಕ ಎದುರಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿರುವ ಅವರು, ತಕ್ಷಣವೇ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ಮಲ್ಪೆ ಬಂದರಿನಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿರುವ ಸುಮಾರು 35,000 ಮೀನು ಕಾರ್ಮಿಕರು ಮತ್ತು ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 25,000 ಕ್ಕೂ ಅಧಿಕ ಕಟ್ಟಡ ನಿರ್ಮಾಣ ಕಾರ್ಮಿಕರು ಸೇರಿದಂತೆ ಒಟ್ಟಾರೆ 1 ಲಕ್ಷಕ್ಕೂ ಹೆಚ್ಚು ವಲಸಿಗರು ಉದ್ಯೋಗ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವಲಸಿಗರಲ್ಲಿ ಹೆಚ್ಚಿನವರು ಸರ್ಕಾರಿ ಆರೋಗ್ಯ ಕೇಂದ್ರಗಳ ಮೇಲೆಯೇ ಅವಲಂಬಿತರಾಗಿದ್ದಾರೆ. ಆದರೆ, ಸ್ಥಳೀಯ ದಾಖಲೆಗಳಿಲ್ಲದ ಕಾರಣ ಅವರು ಜನಗಣತಿಯಲ್ಲಿ ಪರಿಗಣಿಸಲ್ಪಟ್ಟಿಲ್ಲ ಎಂದು ಶಾಸಕರು ಗಮನ ಸೆಳೆದಿದ್ದಾರೆ.

ಜಿಲ್ಲೆಯ ಜನರ ಹಾಗೂ ವಲಸಿಗರ ಆರೋಗ್ಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಕೇಂದ್ರಗಳನ್ನು ವಿಲೀನಗೊಳಿಸುವ ಅಥವಾ ಮುಚ್ಚುವ ನಿರ್ಧಾರವನ್ನು ಕೈಬಿಡಬೇಕು. ಜೊತೆಗೆ, ಜಿಲ್ಲೆಯ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮತ್ತಷ್ಟು ಬಲಪಡಿಸಿ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯರು, ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ನೇಮಕ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ತುರ್ತಾಗಿ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಯಶ್ ಪಾಲ್ ಸುವರ್ಣ ಅವರು ತಮ್ಮ ಮನವಿಯಲ್ಲಿ ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles