ಉಡುಪಿ: ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಬೀಚ್‌ನಲ್ಲಿ ಮಂಗಳವಾರ ಸಂಜೆ ದುರಂತ ಸಂಭವಿಸಿದೆ. ಸಮುದ್ರಕ್ಕೆ ತೆರಳಿದ್ದ ನಾಲ್ವರು ಬಾಲಕರಲ್ಲಿ ಮೂವರು ಸಮುದ್ರಪಾಲರಾಗಿದ್ದಾರೆ.

ಸ್ಥಳೀಯ ನಿವಾಸಿಗಳಾದ ಸಂಕೇತ್ (16), ಸೂರಜ್ (15) ಹಾಗೂ ಆಶೀಶ್ (14) ಎಂಬವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ಸ್ಥಳೀಯರು ಹಾಗೂ ಗಸ್ತು ಸಿಬ್ಬಂದಿಯ ನೆರವಿನಿಂದ ಪತ್ತೆಹಚ್ಚಲಾಗಿದೆ.

ನಾಲ್ವರಲ್ಲಿ ಒಬ್ಬ ಬಾಲಕ ಪಾರಾಗಿದ್ದು, ಅವರು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
