ಕೋಟ : ಉಡುಪಿ, ದ.ಕ. ಜಿಲ್ಲೆಯಲ್ಲಿ ಸಹಕಾರಿ ಸಂಸ್ಥೆಗಳ ಮೂಲಕವೇ ಅರ್ಥಿಕ ಸದೃಢತೆ; ಮಹಿಳಾ ಸ್ವಾವಲಂಬನೆ ಸಾಧ್ಯವಾಗಿದೆ. ಹಿಂದೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಮಾನ್ಯ ವರ್ಗದವರು ವ್ಯವಹಾರ ಮಾಡಲು ಹೆದರುತ್ತಿದ್ದರು. ಸಹಕಾರಿ ವ್ಯವಸ್ಥೆ ಜಾರಿಯಾದ ಮೇಲೆ ಎಲ್ಲ ವರ್ಗದವರೂ ಅರ್ಥಿಕ ವ್ಯವಹಾರ ನಡೆಸಿದರು ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು. ಅವರು ಮೇ ೧೮ರಂದು ಕೋಟ ಮಣೂರಿನಲ್ಲಿ ನಡೆದ ಕೋಟ ಸಹಕಾರಿ ವ್ಯವಸಾಯಿಕ ಸಂಘದ ಮಣೂರು ಶಾಖೆಯ ನೂತನ ಶಾಖಾ ಕಟ್ಟಡ, ಗೋದಾಮು, ವಸತಿ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ೧೭೦ ಸಹಕಾರಿ ಸಂಸ್ಥೆಗಳು ಲಾಭದಲ್ಲಿ ವ್ಯವಹಾರ ನಡೆಸುತ್ತಿದೆ. ಸ್ವಂತ ಕಟ್ಟಡ ಹೊಂದಿದೆ ಎನ್ನುವುದು ನಮ್ಮ ಜಿಲ್ಲೆಯ ಸಹಕಾರಿ ಸಮೃದ್ಧತೆಯನ್ನು ಸೂಚಿಸುತ್ತದ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಮಾತನಾಡಿ, ಕೋಟ ಸಹಕಾರಿ ಸಂಸ್ಥೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ರಂಗದಲ್ಲೇ ಮುಂಚೂಣಿ ಸಂಸ್ಥೆಯಾಗಿ ಬೆಳೆದು ಬಂದಿದ್ದು ೧೩ ಶಾಖೆಗಳು ಮತ್ತು ೧೨ ಪಡಿತರ ಮಾರಾಟ ಮಳಿಗೆ ಮತ್ತು ಸಕಲ ಮಾರಾಟ ಮಳಿಗೆಗಳನ್ನು ಹೊಂದಿದೆ. ಪ್ರಧಾನ ಕಚೇರಿ ಮತ್ತು ೯ ಶಾಖೆಗಳು ಸ್ವಂತ ಕಟ್ಟಡ ಹೊಂದಿದ್ದು ಇನ್ನೆರಡು ಶಾಖೆಗಳ ಸ್ವಂತ ಕಟ್ಟಡಕ್ಕಾಗಿ ಈಗಾಗಲೇ ನಿವೇಶನ ಖರೀದಿ ನಡೆದಿದೆ. ಜತೆಗೆ ರಾಜ್ಯದಲ್ಲೇ ವಿನೂತನ ಯೋಜನೆಗಳನ್ನು ಸಂಸ್ಥೆ ಪರಿಚಯಿಸಿದೆ ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ರೋಟರಿ ವಲಯ-೭ರ ಆರ್.ಪಿ.ಐ.ಸಿ. ಪಿ.ಡಿ.ಜಿ. ಅಭಿನಂದನ್ ಎ.ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭ .ಎಂ.ಎಫ್. ನಿರ್ದೇಶಕರಾಗಿ ಆಯ್ಕೆಯಾದ ಶಿವಮೂರ್ತಿ ಉಪಾಧ್ಯ ಹಾಗೂ ಕಟ್ಟಡ ರಚನೆಗೆ ಸಹಕಾರ ನೀಡಿದವರನ್ನು ಗೌರವಿಸಲಾಯಿತು.ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ ಶೆಟ್ಟಿ, ಕುಂದಾಪುರ ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ, ಕೋಟ ಗ್ರಾ.ಪಂ.ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಎಚ್.ನಾಗರಾಜ ಹಂದೆ, , ಟಿ.ಮಂಜುನಾಥ, ಕೆ.ಉದಯಕುಮಾರ ಶೆಟ್ಟಿ, ಮಹೇಶ ಶೆಟ್ಟಿ ಎಂ. ರವೀಂದ್ರ ಕಾಮತ್, ರಶ್ಮಿತಾ, ರಂಜಿತ್ ಕುಮಾರ್, ಚಂದ್ರ ಪೂಜಾರಿ ಪಿ., ಜಿ.ಅಜಿತ್ ದೇವಾಡಿಗ, ವಸಂತಿ ಪೂಜಾರ್ತಿ, ಉಮಾ ಗಾಣಿಗ ಹಾಗೂ ಸಂಸ್ಥೆಯ ನಿವೃತ್ತ ಸಿ.ಇ.ಒ. ಜಿ.ಎಂ.ಸೋಮಯಾಜಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ವಲಯ ಮೇಲ್ವಿಚಾರಕ ರಾಜಾರಾಮ ಶೆಟ್ಟಿ ಉಪಸ್ಥಿತರಿದ್ದರು.
ಸಂಘದ ನಿರ್ದೇಶಕ ಟಿ. ಮಂಜುನಾಥ ಗಿಳಿಯಾರು ಸ್ವಾಗತಿಸಿ, ನಿರ್ದೇಶಕ ಜಿ.ತಿಮ್ಮ ಪೂಜಾರಿ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ವರದಿ ವಾಚಿಸಿದರು. ದೈ.ಶಿ.ಶಿಕ್ಷಕ ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
