Monday, June 29, 2026

spot_img

ಸಾರ್ವಜನಿಕ ಸ್ಥಳಗಳಲ್ಲಿ ಕುಡುಕರ ಹಾವಳಿ ನಿಯಂತ್ರಿಸಿ, ನಿರ್ಗತಿಕರಿಗೆ ಆಶ್ರಯ ಕಲ್ಪಿಸಿ..

ಉಡುಪಿ : ನಗರದ ಸಾರ್ವಜನಿಕ ಸ್ಥಳಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಹೆಚ್ಚುತ್ತಿರುವ ಕುಡುಕರ ಹಾವಳಿಯನ್ನು ನಿಯಂತ್ರಿಸುವುದರ ಜೊತೆಗೆ ನಿರ್ಗತಿಕರಿಗೆ ಪರ್ಯಾಯ ಆಶ್ರಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾ ಘಟಕವು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿತು. ಸಂಘಟನೆಯ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ಉಡುಪಿ ನಗರವು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ಸಾರ್ವಜನಿಕ ಸ್ಥಳಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಕುಡುಕರು ಮತ್ತು ನಿರ್ಗತಿಕರು ಆಶ್ರಯ ಪಡೆಯುತ್ತಿರುವುದರಿಂದ ಸಾರ್ವಜನಿಕರಿಗೆ, ವಿಶೇಷವಾಗಿ ಮಹಿಳೆಯರಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಲಾಗಿದೆ.

ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಗಲಾಟೆ ನಡೆಸುತ್ತಿರುವುದು ಹಾಗೂ ಅಲ್ಲಿಯೇ ಮಲಗುತ್ತಿರುವುದರಿಂದ ಪ್ರಯಾಣಿಕರು ಮತ್ತು ಪ್ರವಾಸಿಗರಿಗೆ ಅಸಹ್ಯಕರ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದೆಡೆ, ನಿರ್ಗತಿಕರಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಇಲ್ಲದ ಕಾರಣ ಅವರು ಸಾರ್ವಜನಿಕ ಸ್ಥಳಗಳನ್ನೇ ಆಶ್ರಯವಾಗಿ ಬಳಸುವ ಪರಿಸ್ಥಿತಿ ಎದುರಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಅಗತ್ಯವಿದ್ದಲ್ಲಿ ದಂಡ ವಿಧಿಸಿ ತೆರವುಗೊಳಿಸಬೇಕು. ಜೊತೆಗೆ ನಿರ್ಗತಿಕರಿಗೆ ಸೂಕ್ತ ಆಶ್ರಯತಾಣ ಕಲ್ಪಿಸಲು ನಗರಸಭೆ ಮುಂದಾಗಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಒಂದು ವೇಳೆ ನಗರಸಭೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾ ಘಟಕವೇ ಈ ಕುರಿತು ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಂಘಟನೆ ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಗೌರವಾಧ್ಯಕ್ಷ ಲಕ್ಷ್ಮೀಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸಿದ್ದಣ್ಣ ಎಸ್. ಪೂಜಾರಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಬಿ.ವಿ., ಜಿಲ್ಲಾ ಕಾರ್ಯದರ್ಶಿ ಸುಬ್ಬಣ್ಣ ಕಾಮತ್ ಹಾಗೂ ಸದಸ್ಯರಾದ ಅಶೋಕ್, ಸಂತೋಷ್, ಹನುಮಂತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles