Friday, March 6, 2026

spot_img

ಸಿದ್ದಾಪುರದಲ್ಲಿ ಆಯಿಲ್ ಮಿಲ್‌ನಲ್ಲಿ ಭೀಕರ ಅಗ್ನಿ ಅವಘಡ: ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ..

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಹೋಬಳಿಯ ಜನ್ಸಾಲೆ ಪ್ರದೇಶದಲ್ಲಿರುವ ಪ್ರಸಿದ್ಧ ಮಧು ಆಯಿಲ್ ಮಿಲ್ನಲ್ಲಿ ಬುಧವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿ ಅಪಾರ ಆಸ್ತಿನಷ್ಟ ಉಂಟಾಗಿದೆ.

ಮಧ್ಯರಾತ್ರಿ ವೇಳೆಗೆ ಶ್ರೀ ಮಧುಮಾಯ ಆಯಿಲ್ಸ್ (ಮಧು) ಕಾರ್ಖಾನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸುದ್ದಿ ತಿಳಿದ ಕೂಡಲೇ ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್‌ನಿಂದ ಒಂದೊಂದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ.

 ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆಂಗಿನೆಣ್ಣೆ ಹಾಗೂ ಇತರ ದಹನಶೀಲ ವಸ್ತುಗಳು ಸಂಗ್ರಹವಾಗಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿ, ನಂದಿಸುವ ಕಾರ್ಯಾಚರಣೆ ಸವಾಲಾಗಿ ಪರಿಣಮಿಸಿತು.

ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕ ಸಿಬ್ಬಂದಿ ರಾತ್ರಿಯಿಡೀ ನಿರಂತರ ಕಾರ್ಯಾಚರಣೆ ನಡೆಸಿ ಗುರುವಾರ ಬೆಳಿಗ್ಗೆ ಸುಮಾರು 9 ಗಂಟೆಯ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದರು.

ಅಗ್ನಿ ಅವಘಡದಲ್ಲಿ ಕಾರ್ಖಾನೆಯ ಯಂತ್ರೋಪಕರಣಗಳು, ಕಚ್ಚಾ ವಸ್ತುಗಳು ಹಾಗೂ ಸಂಗ್ರಹಿತ ಎಣ್ಣೆ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡದ ನಿಖರ ಕಾರಣ ಪತ್ತೆಯಾಗಬೇಕಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles