Friday, June 19, 2026

spot_img

ಹಾಲಾಡಿಯಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಕುಂದಾಪುರದ ಸಹಯೋಗದಲ್ಲಿ ಹಾಲಾಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕೇಂದ್ರವನ್ನು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಕ್ಕಳ ಆರಂಭಿಕ ಹಂತದ ಪೌಷ್ಟಿಕತೆ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವದ್ದಾಗಿದ್ದು, ಇವು ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಿವೆ ಎಂದು ಹೇಳಿದರು.

ನೂತನ ಕೇಂದ್ರವು ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಮಾದರಿ ಅಂಗನವಾಡಿಯಾಗಿ ರೂಪುಗೊಳ್ಳಲಿ ಎಂದು ಅವರು ಆಶಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles