Friday, July 4, 2025

spot_img

ಹಿಂದೂ ವಿರೋಧಿ ಬೆಳವಣಿಗೆ ಖಂಡಿಸಿ ಹಿಂದೂ ಸಂಘಟನೆಗಳ ಮನವಿ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಹಿಂದೂ ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒಕ್ಕೂಟ ಒತ್ತಾಯಿಸಿತು. ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದು ಮನವಿ ನೀಡಲು ಬಂದಾಗಲೂ ಉಡುಪಿ ಡಿಸಿ ಗೈರು ಹಾಜರಾಗಿದ್ದ ಬಗ್ಗೆ ಒಕ್ಕೂಟದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಕಾರ್ಯಕರ್ತರ ಖಾಸಗಿ ಜೀವನದ ವ್ಯಕ್ತಿತ್ವದ ಗೌರವವನ್ನು, ಘನತೆಯನ್ನು ಹಾಳು ಮಾಡಲಾಗುತ್ತಿದೆ. ಕೋಮು ಸೌಹಾರ್ದ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ದೂರಿದರು. ಮಧ್ಯರಾತ್ರಿ ಕಾರ್ಯಕರ್ತರ ಮನೆಗೆ ತೆರಳಿ ವಿಚಾರಣೆ ನಡೆಸುವುದು ಫೋಟೋ ತೆಗೆಯುವುದು ಸರಿಯಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಏನೇ ಬರೆದರು ಹಿಂದೂ ಕಾರ್ಯಕರ್ತರನ್ನು ಬಂಧನ ಮಾಡಲಾಗುತ್ತಿದೆ ಎಂದು ಅಕ್ಷೇಪಿಸಿದರು. ಮಾನವ ಹಕ್ಕುಗಳ ಉಲ್ಲಂಘನೆ ವಿಷಯದಲ್ಲಿ ಉನ್ನತ ಮಠದ ತನಿಖೆ ಆಗಬೇಕು, ಪೊಲೀಸರಿಂದ ಕಿರುಕುಳಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಪರಿಹಾರ ನೀಡಿ ಪೊಲೀಸರು ಲಿಖಿತ ಕ್ಷಮಾಪಣೆ ಕೇಳಬೇಕು ಎಂದು ಒತ್ತಾಯಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles