ಉಡುಪಿ: ಶಿರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಆದ ಪ್ರಕಾಶ ಗುಡಿಗಾರ್ ಹಾಗೂ ವಸಂತಿ ದಂಪತಿಗಳ ಮಗಳಾದ ಪ್ರಕೃತಿ ಪಿ ಗುಡಿಗಾರ್ ಇವರು 2024-2025 ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 624/625 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಬಂದಿದ್ದು ,ಇವರಿಗೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾದ ಶ್ರೀ ಹರಿರಾಮ್ ಶಂಕರ್ ಐ.ಪಿ.ಎಸ್ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಅರುಣ್ ಕೆ ಐ.ಪಿ.ಎಸ್, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸುಧಾಕರ ನಾಯ್ಕ್ ಮತ್ತು ಪರಮೇಶ್ವರ ಹೆಗಡೆ ಹಾಗೂ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರಿಯಂವದಾ ಐ.ಪಿ.ಎಸ್ ರವರು ಉಪಸ್ಥಿತರಿದ್ದರು.
