Saturday, July 5, 2025

spot_img

ಹೊಂಬೆಳಕು ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ : ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್ ಹಾಗೂ ನಗರ
ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಹಾಗೂ ಸಿಬ್ಬಂದಿಗಳ ಕ್ರೀಡಾಕೂಟದಲ್ಲಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಹಿಳೆಯರ ವಿಭಾಗವು ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ, ಮಹಿಳೆಯರ ಹಗ್ಗ ಜಗ್ಗಾಟದಲ್ಲಿ ದ್ವಿತೀಯ ಸ್ಥಾನ, ಪುರುಷರ ಹಗ್ಗ ಜಗ್ಗಾಟದಲ್ಲಿ ತೃತೀಯ ಸ್ಥಾನ ಹಾಗೂ ಪಥಸಂಚಲನದಲ್ಲಿ 5 ನೇ ಸ್ಥಾನ ಸೇರಿದಂತೆ ಒಟ್ಟು 4 ಬಹುಮಾನವನ್ನು ಗೆದ್ದು, ಪಾರಿತೋಷಕ, ಪ್ರಮಾಣಪತ್ರ ಹಾಗೂ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು.


ಪಥ ಸಂಚಲನದಲ್ಲಿ ಬ್ರಹ್ಮಾವರ ತಾಲೂಕು ಮೊದಲ ಸ್ಥಾನವನ್ನು ಪಡೆದುಕೊಂಡಿತು. ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ ಶೆಟ್ಟಿ, ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಮುಖ್ಯಾಧಿಕಾರಿ, ಪಂಚಾಯತಿಯ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles