Thursday, October 23, 2025

spot_img

15 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಮಾದಕ ದ್ರವ್ಯ ನಾಶ

ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು 7,12,963 ರೂಪಾಯಿ ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು 8,08,464 ರೂಪಾಯಿ ಮೌಲ್ಯದ ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ಸುಮಾರು 15,21,427 ರೂಪಾಯಿ ಮೌಲ್ಯದ ಮಾದಕ ದ್ರವ್ಯ ನಾಶಪಡಿಸಲಾಯಿತು.

ಉಡುಪಿ ನಗರ ಠಾಣೆಯ 03 ಪ್ರಕರಣ, ಸೆನ್‌ ಠಾಣೆಯ 2 ಪ್ರಕರಣ ಹಾಗೂ ಮಲ್ಪೆ, ಪಡುಬಿದ್ರಿ, ಶಿರ್ವಾ, ಕಾರ್ಕಳ ನಗರ ಹಾಗೂ ಮಣಿಪಾಲ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 10 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥವನ್ನು ಮಾನ್ಯ ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಯಿತು.

ಇದರಲ್ಲಿ 2021ರ 01 ಪ್ರಕರಣ, 2024ರ 03 ಪ್ರಕರಣ ಹಾಗೂ 2025ರ 06 ಪ್ರಕರಣ ಒಳಗೊಂಡಿದೆ. 2021ರ ಪಡುಬಿದ್ರಿ ಠಾಣೆಯ ಅಪರಾಧ ಕ್ರಮಾಂಕ 76/2021ರ ಪ್ರಕರಣವು ಸಜೆಯಲ್ಲಿ ಮುಕ್ತಾಯಗೊಂಡಿದ್ದು, ಆರೋಪಿತ ಅಬ್ದುಲ್‌ ರಹಿಮಾನ್‌ ಎಂಬಾತನಿಗೆ ಮಾನ್ಯ ನ್ಯಾಯಾಲಯವು 8,000 ರೂಪಾಯಿ ಜುಲ್ಮಾನೆ ವಿಧಿಸಿ ಶಿಕ್ಷೆ ಪ್ರಕಟಿಸಿರುತ್ತದೆ. 2025ರ ಮಣಿಪಾಲ ಠಾಣೆಯ ಪ್ರಕರಣವು ತನಿಖೆಯಲ್ಲಿದ್ದು, ಉಳಿದ ಎಲ್ಲಾ ಪ್ರಕರಣಗಳು ಮಾನ್ಯ ನ್ಯಾಯಾಲಯದ ವಿಚಾರಣೆಯಲ್ಲಿ ಇದೆ.

ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಹರಿರಾಮ್‌ ಶಂಕರ್‌, ಐಪಿಎಸ್‌, ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿ ಸದಸ್ಯರು ಹಾಗೂ ಸಹಾಯಕ ಪೊಲೀಸ್‌ ಅಧೀಕ್ಷಕರಾದ ಡಾ. ಹರ್ಷಾ ಪ್ರಿಯಂವದಾ ಐ.ಪಿ.ಎಸ್. ಮತ್ತು ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರು ಹಾಗೂ ಸದಸ್ಯರಾದ ಪ್ರಭು ಡಿ.ಟಿ. ಇತರ ಪೊಲೀಸ್‌ ಅಧಿಕಾರಿಯವರು ಮತ್ತು ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿಯ ಅಧಿಕಾರಿಯವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles