ಮಣಿಪಾಲ : ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸರಿಸುಮಾರು 16 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸ್ ರು ಬಂಧಿಸಿದ್ದಾರೆ. ರಾಜೇಶ್ ಕುಮಾರ್ ಬಂಧಿತ ಆರೋಪಿ.

ಮಣಿಪಾಲ ಠಾಣೆಯಲ್ಲಿ ದಾಖಲಾದ ಹಳೆಯ ಪ್ರಕರಣವೊಂದರಲ್ಲಿ ವಿಚಾರಣೆಗಾಗಿ ಆರೋಪಿಗೆ ಬರಹೇಳಲಾಗಿತ್ತು ಆದರೆ ಆರೋಪಿ ತಲೆ ಮರೆಸಿಕೊಂಡಿದ್ದರು. ಸದ್ಯ ಆರೋಪಿಯನ್ನು ಮಣಿಪಾಲ ಪೊಲೀಸ್ ನೀರಿಕ್ಷಕ ಮಹೇಶ್ ಪ್ರಸಾದ್ ರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಬನಶಂಕರಿ ಇಟ್ಟಮಡು ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.



