ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯರವರ ಪ್ರತಿಮೆ ಎದುರು ಭಾಗದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ 18 ಜನ ಶಾಸಕರನ್ನು ಸಸ್ಪೆಂಡ್ ಮಾಡಿದ ಸ್ಪೀಕರ್ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನೆರವೇರಿತು ಹಾಗೂ ಇಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುವ ಅಹೋ ರಾತ್ರಿಯ ಧರಣಿಯ ಅಂಗವಾಗಿ ರಾಜ್ಯ ಸರಕಾರಕ್ಕೆ ಜನತೆಯ ಪರವಾಗಿ ಎಚ್ಚರಿಕೆಯ ಸಂದೇಶ ರವಾನೆ ಮಾಡುವ ಧರಣಿಗೆ ಚಾಲನೆಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ವಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ವಿವಿಧ ಜಿಲ್ಲೆಯ ಶಾಸಕರು ವಿಧಾನ ಪರಿಷತ್ತಿನ ಸದಸ್ಯರು ರಾಜ್ಯದ ವಿವಿಧ ಮಂಡಲದ ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.