ಕಾಪು : ಕಾಪು ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೋಗುವ ರಸ್ತೆಯಲ್ಲಿ ಬ್ರಿಡ್ಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 33.46 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇದರ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ಸುವರ್ಣ, ಉಪಾಧ್ಯಕ್ಷರಾದ ಉಷಾ ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್ ಹಾಗೂ ಕಾಪು ಪುರಸಭೆಯ ಸದಸ್ಯರು, ಎಲ್ಲೂರು ಗ್ರಾಮ ಪಂಚಾಯತ್ ಸದಸ್ಯರು ಸ್ಥಳೀಯರು ಉಪಸ್ಥಿತರಿದ್ದರು.