Wednesday, May 13, 2026

spot_img

4 ಲೇಬರ್ ಕೋಡ್ ವಿರೋಧಿಸಿ ಸಿಐಟಿಯು ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರ 4 ಲೇಬರ್ ಕೋಡ್ ಕುರಿತು ಅಧಿಸೂಚನೆ ಪತ್ರ ಬಿಡುಗಡೆಗೊಳಿಸಿರುವುದನ್ನು ವಿರೋಧಿಸಿ, ಇಂದು ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಸಿಐಟಿಯು ಉಡುಪಿ ವಲಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಅಧಿಸೂಚನೆಯ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

 ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಹಾಗೂ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಅವರು, ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವಂತಹ ಕಾರ್ಮಿಕ ಸಂಹಿತೆಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಸುಭಾಷ್ ನಾಯಕ್, ಮುಖಂಡರಾದ ಸೈಯದ್, ಮುರಳಿ, ಜನರಲ್ ವರ್ಕರ್ಸ್ ಯೂನಿಯನ್ ಕಾರ್ಯದರ್ಶಿ ರಮೇಶ್, ಬೀಡಿ ಅಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್., ಕಾರ್ಯದರ್ಶಿ ಉಮೇಶ್ ಕುಂದರ್, ಜನವಾದಿ ಮಹಿಳಾ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷೆ ಸರೋಜ ಎಸ್., ಮುಖಂಡರಾದ ಶಾರದ, ಸಿಐಟಿಯು ಮುಖಂಡರಾದ ನಾಗೇಶ್, ವಿಶ್ವನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್. ಕಾಂಚನ್ ನಿರೂಪಿಸಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles