Friday, May 8, 2026

spot_img

6 ಲಕ್ಷ ರೂಪಾಯಿ ಕಳವು ಪ್ರಕರಣ : ಆರೋಪಿ ಬಂಧನ, ನಗದು ವಶಕ್ಕೆ

ಉಡುಪಿ : ಯಡ್ತರೆ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದ ಬಾಡಿಗೆ ಮನೆಯಲ್ಲಿ ನಡೆದಿದ್ದ 6 ಲಕ್ಷ ರೂಪಾಯಿ ನಗದು ಕಳವು ಪ್ರಕರಣವನ್ನು ಬೈಂದೂರು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಹೇಂದ್ರ ಸೈನ್ (23) ಬಂಧಿತ ಆರೋಪಿ.‌

 ಏಪ್ರಿಲ್ 23ರಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯ ಅವಧಿಯಲ್ಲಿ, ರಾಜಸ್ಥಾನ ಮೂಲದ ರಾವಲ್ ಸಿಂಗ್ ಅವರು ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿತ್ತು. ಮನೆಯವರು ಇಲ್ಲದ ಸಮಯವನ್ನು ಸದುಪಯೋಗಪಡಿಸಿಕೊಂಡ ಕಳ್ಳರು, ಮುಂಭಾಗದ ಬಾಗಿಲಿನ ಬೀಗ ಮುರಿದು ಒಳನುಗ್ಗಿ, ಗೋಡ್ರೇಜ್ ಅಲ್ಮಾರಿಯಲ್ಲಿ ಇರಿಸಿದ್ದ 6 ಲಕ್ಷ ರೂಪಾಯಿ ನಗದು ಹಣವನ್ನು ಕಳವು ಮಾಡಿದ್ದರು. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.

ಪ್ರಕರಣದ ಸುಳಿವು ಪತ್ತೆಹಚ್ಚಲು ವಿಶೇಷ ತಂಡ ರಚಿಸಿ, ತನಿಖೆ ವೇಳೆ ಮಹೇಂದ್ರ ಸೈನ್ (23) ಎಂಬಾತನನ್ನು ಮೇ 7ರಂದು ಬಂಧಿಸಲಾಗಿದೆ. ಆತ ರಾಜಸ್ಥಾನದ ಜೋಧ್‌ಪುರ ಜಿಲ್ಲೆಯ ಸೇತ್ರಾವ್ ಅಂಚೆ ವ್ಯಾಪ್ತಿಯ ನಿವಾಸಿಯಾಗಿದ್ದು, ಪ್ರಸ್ತುತ ಬೈಂದೂರು ಬಂಕೇಶ್ವರದಲ್ಲಿ ವಾಸಿಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನಿಂದ ಕಳವು ಮಾಡಿದ್ದ 6 ಲಕ್ಷ ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles